‘ವರದ’ ಸ್ಪೆಷಲ್ ಟೀಸರ್ ರಿಲೀಸ್

ವಿನೋದ್ ಪ್ರಭಾಕರ್ ಅವರ ಜನ್ಮದಿನವಾದ ಇಂದು ಅವರು ಹೀರೋ ಆಗಿರುವ ಬಹುನಿರೀಕ್ಷಿತ ‘ವರದ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.

ಮರಿ ಟೈಗರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ವಿನೋದ್ ಪ್ರಭಾಕರ್ ಹುಟ್ಟುಹಬ್ಬದ ಪ್ರಯುಕ್ತ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬರ್ತ್ ಡೇ ಟೀಸರ್ ಬಿಡುಗಡೆ ಮಾಡಲಾಗಿದೆ.  ಈ ಟೀಸರ್ ರಿಲೀಸ್ ಆದ 2 ಗಂಟೆಯಲ್ಲಿ 31ಸಾವಿರಕ್ಕೂ ಹೆಚ್ಚಿನ ಭರ್ಜರಿ ವೀಕ್ಷಣೆ ಪಡೆದಿದೆ.

ಉದಯ್ ಪ್ರಕಾಶ್ ನಿರ್ದೇಶನದ ವರದ ಚಿತ್ರಕ್ಕೆ ಪ್ರದೀಪ್ ವರ್ಮಾ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಅಮಿತ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಚರಣ್ ರಾಜ್, ಅನಿಲ್ ಸಿದ್ದು, ಅಶ್ವಿನಿ ಗೌಡ, ಉಮೇಶ್ ಬಣಕಾರ್ ಇತರರು ಚಿತ್ರದಲ್ಲಿ ನಟಿಸಿದ್ದಾರೆ.

ಈಗಾಗಲೇ ಈ ಸಿನಿಮಾ ಶೂಟಿಂಗ್ ಬಹುತೇಕ ಮುಗಿದಿದ್ದು, ಜನವರಿ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿತ್ರತಂಡ ತಯಾರಿ ನಡೆಸಿದೆ. ಆಪಲ್ ಅಡ್ಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ಉದಯ ಪ್ರಕಾಶ್ ಅವರು ನಿರ್ಮಾಣ ಮಾಡಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!