ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಹಾಡನ್ನು ಕಾಪಿ ಮಾಡಲಾಗಿದೆ ಎಂದು ಆರೋಪಿಸಿ ತೈಕ್ಕುಡಂ ಬ್ರಿಡ್ಜ್ ಆಲ್ಬಮ್ ತಂಡ, ಕಾಂತಾರ ಸಿನಿಮಾ ವಿರುದ್ಧ ಕೇಸ್ ಹಾಕಲು ನಿರ್ಧರಿಸಿದೆ.
ಮಲಯಾಳಂನ ‘ನವರಸಂ’ ಎನ್ನುವ ಆಲ್ಬಂನಿಂದ ವರಾಹ ರೂಪಂ ಹಾಡನ್ನು ಕದಿಯಲಾಗಿದೆ ಎನ್ನುವ ಆರೋಪ ಎದುರಾಗಿದೆ. ನವರಸಂ ಆಲ್ಬಂನ ಹಾಡನ್ನು ಬಹುತೇಕ ಯತಾವತ್ತಾಗಿ ಕಾಂತಾರ ಹಾಡಿನಲ್ಲಿ ಬಳಸಲಾಗಿದೆ ಎನ್ನಲಾಗಿದೆ.
‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ನಡುವೆ ಇರುವ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು.
ಇದು ಕಾಪಿ ಅಲ್ಲ, ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದು ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಸಮಜಾಯಿಷಿ ನೀಡಿದ್ದರು.
ಇಷ್ಟು ದಿನ ಸುಮ್ಮನಿದ್ದ ತೈಕ್ಕುಡಂ ಬ್ರಿಡ್ಜ್ ತಂಡದವರು ಈಗ ಕೇಸ್ ಹಾಕಲು ನಿರ್ಧರಿಸಿದ್ದಾರೆ. ಕಾಂತಾರ’ ಸಿನಿಮಾದ ನಿರ್ಮಾಪಕ, ನಿರ್ದೇಶಕ, ಹಾಗೂ ಸಂಗೀತ ನಿರ್ದೇಶಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಈ ಬಗ್ಗೆ ಸಿನಿಮಾ ತಂಡದಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂದು ಕಾದು ನೋಡಬೇಕಿದೆ.
___

Be the first to comment