Veda: ಒಟಿಟಿಯಲ್ಲಿ ಬರಲಿದೆ ವೇದ

ಒಟಿಟಿ ಪ್ರೇಕ್ಷಕರ ಮನಗೆಲ್ಲಲು ‘ವೇದ’ ಚಿತ್ರ ರೆಡಿಯಾಗಿದ್ದು ಫೆಬ್ರವರಿ 10ರಂದು ಜೀ5ನಲ್ಲಿ ಬಿಡುಗಡೆಯಾಗಲಿದೆ.

‘ವೇದ’ ಚಿತ್ರ ಕಳೆದ ವರ್ಷ ಡಿಸೆಂಬರ್ 23ರಂದು ತೆರೆಕಂಡಿತ್ತು. ಎ. ಹರ್ಷ ಹಾಗೂ ಶಿವಣ್ಣ ಹಿಟ್ ಕಾಂಬಿನೇಶನ್ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡುವಲ್ಲಿ ಯಶಸ್ವಿಯಾಗಿತ್ತು.

ಹ್ಯಾಟ್ರಿಕ್ ಹೀರೋ ಶಿವಣ್ಣ ಅವರ 125ನೇ ಸಿನಿಮಾ ಹಾಗೂ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ ಇದಾಗಿದೆ.

ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

ಗಾನವಿ ಲಕ್ಷ್ಮಣ್, ಶ್ವೇತ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ‌ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.

__

Be the first to comment

Leave a Reply

Your email address will not be published. Required fields are marked *

Translate »
error: Content is protected !!