sunil Rao: ವೀರ ಸಾವರ್ಕರ್ ಲುಕ್ ವೈರಲ್

ಸುನಿಲ್ ರಾವ್ ನಟಿಸುತ್ತಿರುವ ವೀರ್ ಸಾವರ್ಕರ್ ಪಾತ್ರದ ಲುಕ್ ವೈರಲ್ ಆಗಿದೆ.

ತುರ್ತು ನಿರ್ಗಮನ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಸುನಿಲ್ ರಾವ್ ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರ ಪಾತ್ರದಲ್ಲಿ ಸುನಿಲ್ ರಾವ್ ಕಾಣಿಸಿಕೊಂಡಿದ್ದಾರೆ.

ಹಿರಿಯ ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ ಅವರ ಸಾರಥ್ಯದಲ್ಲಿ ಸಾವರ್ಕರ್ ಸಿನಿಮಾ ಮೂಡಿಬರುತ್ತಿದೆ. ಸಾವರ್ಕರ್ ಆಗಿ ಯಾರು ಕಾಣಿಸಿಕೊಳ್ಳುತ್ತಾರೆ ಎನ್ನುವುದು ಬಹಿರಂಗವಾಗಿರಲಿಲ್ಲ. ಈಗ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಸುನಿಲ್ ರಾವ್ ಸಾವರ್ಕರ್ ಆಗಿ ನಟಿಸುತ್ತಿದ್ದಾರೆ ಎನ್ನುವುದು ಬಹಿರಂಗವಾಗಿದೆ.

ಸಾವರ್ಕರ್ ಲುಕ್ ನಲ್ಲಿ ಸುನಿಲ್ ರಾವ್ ಅನೇಕ ಪೋಸ್ ನೀಡಿದ್ದಾರೆ. ಇನ್ನು ವಿಶೇಷ ಎಂದರೆ ಈ ಸಿನಿಮಾದಲ್ಲಿ ಮಹಾತ್ಮ ಗಾಂಧಿ ಪಾತ್ರದಲ್ಲಿ ಹಿಂದಿಯ ನಟ ಕಾಣಿಸಿಕೊಳ್ಳುತ್ತಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಾವರ್ಕರ್ ಸಿನಿಮಾದಲ್ಲಿ ರಂಗಾಯಣ ರಘು, ಸಾಯಿಕುಮಾರ್, ರವಿಶಂಕರ್, ಅನುಪ್ರಭಾಕರ್ ಸೇರಿದಂತೆ ಅನೇಕ ಕಲಾವಿದರು ನಟಿಸುತ್ತಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!