ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಸಿನಿಮಾ ವಿದ್ಯಾಪತಿ ಶೂಟಿಂಗ್ ಕಂಪ್ಲೀಟ್ ಆಗಿದೆ.
ಈ ಹಿಂದೆ ಡಾಲಿ ಪಿಕ್ಷರ್ಸ್ ಬ್ಯಾನರ್ ಅಡಿಯಲ್ಲಿ ತೆರೆಕಂಡಿದ್ದ ಟಗರು ಪಲ್ಯ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ನಾಗಭೂಷಣ್ ವಿದ್ಯಾಪತಿ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ನಾಗಭೂಷಣ್ ಗೆ ಜೋಡಿಯಾಗಿ ಬೆಡಗಿ ಮಲೈಕಾ ವಸೂಪಾಲ್ ಇದ್ದಾರೆ. ಕರಾಟೆ ಕಿಂಗ್ ಗೆಟಪ್ ನಲ್ಲಿ ನಾಗಭೂಷಣ್ ಕಾಣಿಸಿಕೊಂಡಿದ್ದು, ಅವರಿಗೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ.
ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಜೊತೆಗೆ ಸಂಕಲನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಡಾಲಿ ಧನಂಜಯ್ ಟಗರು ಪಲ್ಯ ಬಳಿಕ ಈ ಸಿನಿಮಾ ಪ್ರೊಡ್ಯೂಸ್ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಆಕ್ಷನ್ ಇದೆ. ಹಾಸ್ಯದ ಹೊನಲು ಇರಲಿದೆ. ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಪ್ರಚಾರ ಕಾರ್ಯವನ್ನು ಆರಂಭಿಸಲಿದೆ.
ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ.
—-
Post Views:
213
Be the first to comment