ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಪೋಸ್ಟರ್ ಬಿಡುಗಡೆ

ಅರುಣ್ ಅಮುಕ್ತ ನಿರ್ದೇಶನದ  ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ  ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ಇದೊಂದು ಟೀನೇಜ್ ಕಲ್ಟ್ ಸಿನಿಮಾ. ಇದರಲ್ಲಿ ಚಂದನ್ ಶೆಟ್ಟಿ, ಭಾವನಾ ಅಪ್ಪು, ಅಮರ್, ಮನಸ್ವಿ, ವಿವಾನ್ ಸುನಿಲ್ ಪುರಾಣಿಕ್, ಅರವಿಂದ ರಾಜ್, ಪ್ರಶಾಂತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇದರಲ್ಲಿ 4 ಪಾತ್ರಗಳು  ಪೋಸ್ಟರ್ ನಲ್ಲಿ ಕಾಣಿಸಿಕೊಂಡಿವೆ.

ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.

ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ.  ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟದಲ್ಲಿದೆ.

ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!