ದಳಪತಿ ವಿಜಯ್ ತಮಿಳುನಾಡು ರಾಜಕೀಯದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದು, ಅವರ ಸಿನಿಮಾ ಭವಿಷ್ಯ ಪ್ರಶ್ನಾರ್ಥಕವಾಗಿದೆ.
ಸೆನ್ಸಾರ್ ಸಮಸ್ಯೆಯಿಂದಾಗಿ ವಿಜಯ್ ಅವರ ಕೊನೆಯ ಚಿತ್ರ ಎನ್ನಲಾಗಿದ್ದ ‘ಜನ ನಾಯಗನ್’ ಇನ್ನೂ ರಿಲೀಸ್ ಆಗಿಲ್ಲ. ಇದರಿಂದ ಅಭಿಮಾನಿಗಳಿಗೆ ನಿರಾಶೆ ಉಂಟಾಗಿದೆ. ಚಿತ್ರದ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ವಿಜಯ್ ಅವರ ಕನಸಿಗೆ ಸದ್ಯಕ್ಕೆ ಅಡಚಣೆ ಉಂಟಾಗಿದೆ.
ಟಿವಿಕೆ ಪಕ್ಷವನ್ನು ಸ್ಥಾಪಿಸಿ ರಾಜಕೀಯ ಚುನಾವಣೆ ಕಣಕ್ಕಿಳಿದಿರುವ ವಿಜಯ್ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಗುರಿ ಹೊಂದಿದ್ದಾರೆ. ರಾಜಕೀಯದಲ್ಲಿ ಇದು ಅವರ ಮೊದಲ ದೊಡ್ಡ ಪರೀಕ್ಷೆಯಾಗಿದೆ. ಒಂದೊಮ್ಮೆ ಚುನಾವಣೆಯಲ್ಲಿ ಬಹುಮತ ಪಡೆದರೆ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಆಗ ಅವರ ಸಿನಿಮಾ ಜೀವನ ಸಂಪೂರ್ಣವಾಗಿ ವಿರಾಮ ಪಡೆಯುವ ಸಾಧ್ಯತೆ ಇದೆ.
ರಾಜಕೀಯದಲ್ಲಿ ನಿರೀಕ್ಷಿತ ಯಶಸ್ಸು ಸಿಗದಿದ್ದರೆ ದಳಪತಿ ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಯೋಜನೆ ಹೊಂದಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಅಟ್ಲಿ ಜೊತೆ ಸಿನಿಮಾ ಮಾಡುವ ಸಾಧ್ಯತೆ ಚರ್ಚೆಯಲ್ಲಿದ್ದು, ರಾಜಕೀಯ ಫಲಿತಾಂಶದ ಮೇಲೆ ವಿಜಯ್ ಅವರ ಮುಂದಿನ ಹೆಜ್ಜೆ ನಿರ್ಧಾರವಾಗಲಿದೆ.
—-





Be the first to comment