ಬರಲಿದೆ ವಿಜಯ ಸಂಕೇಶ್ವರ ಬಯೋಪಿಕ್

ವಿಆರ್‌ಎಲ್ ಲಾಜಿಸ್ಟಿಕ್ ಸಂಸ್ಥೆಯ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನ ಆಧರಿಸಿದ ‘ ವಿಜಯಾನಂದ ‘ಬಯೋಪಿಕ್ ಚಿತ್ರ ಕನ್ನಡದಲ್ಲಿ ತೆರೆಗೆ ಬರಲಿದೆ.

ವಿಜಯ ಸಂಕೇಶ್ವರ ಅವರ ಹುಟ್ಟುಹಬ್ಬವಾದ ಆಗಸ್ಟ್ 2 ರಂದು ‘ ವಿಜಯಾನಂದ’ ಸಿನಿಮಾದ ಟೈಟಲ್ ಪೋಸ್ಟರ್ ಅನಾವರಣಗೊಂಡಿದೆ. ವಿಜಯ ಸಂಕೇಶ್ವರ ಅವರ ಪುತ್ರ ಆನಂದ ಸಂಕೇಶ್ವರ ಅವರು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ವಿಆರ್‌ಎಲ್ ಫಿಲ್ಮ್ ಪ್ರೊಡಕ್ಷನ್’ ಸಂಸ್ಥೆಯ ಮೂಲಕ ನಿರ್ಮಾಪಕರಾಗಿ ಆನಂದ್ ಸಂಕೇಶ್ವರ ಅವರು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಟ್ರಂಕ್ ಹೆಸರಿನ ಹಾರರ್ ಸಿನಿಮಾ ನಿರ್ದೇಶನ ಮಾಡಿದ್ದ ರಿಷಿಕಾ ಶರ್ಮಾ ಅವರು ಚಿತ್ರ ನಿರ್ದೇಶನ ಮಾಡಲಿದ್ದಾರೆ.

ಟ್ರಂಕ್’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದ ನಿಹಾಲ್ ಅವರು ವಿಜಯಾನಂದ ಚಿತ್ರದಲ್ಲಿ ವಿಜಯ ಸಂಕೇಶ್ವರ ಆಗಿ ನಟನೆ ಮಾಡಲಿದ್ದಾರೆ. ತೆಲುಗು ಮತ್ತು ಮಲಯಾಳಂ ಚಿತ್ರಗಳಲ್ಲಿ ಕೆಲಸ ಮಾಡಿರುವ ಗೋಪಿ ಸುಂದರ್ ಈ ಚಿತ್ರಕ್ಕೆ ಸಂಗೀತ, ಹಿನ್ನೆಲೆ ಸಂಗೀತ ನೀಡಲಿದ್ದಾರೆ.

ಕೀರ್ತನ್ ಪೂಜಾರಿ ಛಾಯಾಗ್ರಹಣ, ಹೇಮಂತ್ ಕುಮಾರ್ ಡಿ ಸಂಕಲನ, ಇರ್ಮಾನ್ ಸರ್ದಾರಿಯಾ ನೃತ್ಯ ಸಂಯೋಜನೆ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕೆ ಇದೆ. ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸಲು ಯೋಜನೆ ರೂಪಿಸಲಾಗಿದ್ದು 2022ರಲ್ಲಿ ಚಿತ್ರ ತೆರೆಗೆ ಬರಲಿದೆ.

1976ರಲ್ಲಿ ಒಂದು ಟ್ರಕ್‌ನಿಂದ ತಮ್ಮ ಜೀವನ ಆರಂಭಿಸಿದ ವಿಜಯ ಸಂಕೇಶ್ವರ ಅವರ ವಿಆರ್‌ಎಲ್ ಸಂಸ್ಥೆ ಇಂದು ಭಾರತದ ಅತಿ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ವಿಜಯವಾಣಿ ಪತ್ರಿಕೆ, ವಿಆರ್‌ಎಲ್ ಸಾರಿಗೆ, ದಿಗ್ವಿಜಯ ಸುದ್ದಿ ವಾಹಿನಿ ಇವರು ಸ್ಥಾಪಿಸಿದ ಸಂಸ್ಥೆಗಳಾಗಿವೆ.

ವಿಜಯ ಸಂಕೇಶ್ವರ ಅವರು 3 ಬಾರಿ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!