ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ವಿಜಯ್ ಗೆ ಮಲೆಯಾಳಂ ನಟಿ ಜೊತೆಗಿನ ಸಂಬಂಧ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಈ ಜೋಡಿ ಮದುವೆಯಾಗಿ 23 ವರ್ಷಗಳಾಗಿದ್ದು, ಜೇಸನ್ ಎಂಬ ಮಗ ಮತ್ತು ದಿವ್ಯಾ ಎಂಬ ಮಗಳಿದ್ದಾರೆ.
ವಿಜಯ್ ಮತ್ತು ಸಂಗೀತಾ ಅವರ ವಿಚ್ಛೇದನದ ಬಗ್ಗೆ ವದಂತಿಗಳು ಪ್ರಾರಂಭವಾಗಿದ್ದು ಅವರು ಬೇರೆಯಾಗಲು ಈಗಾಗಲೇ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ.
ವಿಜಯ್ ಪ್ರಸ್ತುತ ತಮ್ಮ ಮುಂಬರುವ ಚಿತ್ರ ವಾರಿಸು ಪ್ರಚಾರ ಹಾಗೂ ರಿಲೀಸ್ ವಿಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ವಂಶಿ ಪೈಡಿಪಲ್ಲಿ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಆರ್ ಶರತ್ ಕುಮಾರ್, ಪ್ರಕಾಶ್ ರಾಜ್, ಜಯಸುಧಾ, ಖುಷ್ಬು, ಶ್ರೀಕಾಂತ್, ಶಾಮ್, ಯೋಗಿ ಬಾಬು, ಮತ್ತು ಸಂಗೀತಾ ಕ್ರಿಶ್ ಸೇರಿದಂತೆ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಇದನ್ನು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ನಿರ್ಮಿಸಿದ್ದಾರೆ.
___

Be the first to comment