ದರ್ಶನ್–ಸುದೀಪ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ಪರಿಣಾಮ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಬೇಸತ್ತ ವಿಜಯಲಕ್ಷ್ಮೀ ದೂರು ದಾಖಲಿಸಿದ್ದಾರೆ.
ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ಹೇಟ್ ಕಮೆಂಟ್‌ಗಳ ಸ್ಕ್ರೀನ್ಶಾಟ್‌ಗಳನ್ನು ಸೈಬರ್ ಪೊಲೀಸರಿಗೆ ವಿಜಯಲಕ್ಷ್ಮೀ ಸಲ್ಲಿಸಿದ್ದಾರೆ. ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸೈಬರ್ ಅಪರಾಧ ವಿಭಾಗ ತನಿಖೆ ಆರಂಭಿಸಿದೆ.
ವಿಜಯಲಕ್ಷ್ಮೀ ವಿರುದ್ಧ ಕಮೆಂಟ್ ಮಾಡಿದ ಹಲವು ಖಾತೆಗಳು ಸುದೀಪ್ ಅಭಿಮಾನಿಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಕೆಲ ಖಾತೆಗಳು ಸುದೀಪ್ ಹೆಸರು, ಸ್ಟಿಕ್ಕರ್ ಹಾಗೂ ಫ್ಯಾನ್ ಟ್ಯಾಗ್ ಬಳಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇವರು ನಿಜವಾದ ಅಭಿಮಾನಿಗಳೇ ಅಥವಾ ನಕಲಿ ಖಾತೆಗಳೇ ಎಂಬುದು ತನಿಖೆಯ ನಂತರ ಸ್ಪಷ್ಟವಾಗಲಿದೆ.
ಅಶ್ಲೀಲ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ನಟಿ ರಮ್ಯಾ ಕೂಡ ಇದೇ ರೀತಿಯ ಪ್ರಕರಣದಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ದರ್ಶನ್ ಅಭಿಮಾನಿಗಳನ್ನು ಅರೆಸ್ಟ್ ಮಾಡಿದ್ದರು.
—





Be the first to comment