ತಮ್ಮ ವಿರುದ್ಧ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್ಸ್ ಮಾಡಿದವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ಎಫ್ಐಆರ್ ದಾಖಲಿಸಿ ತನಿಖೆ ಪ್ರಾರಂಭಗೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
‘ಪೊಲೀಸರು ಎಲ್ಲರಿಗೂ ಸಮಾನ. ಈ ಪ್ರಕರಣದಲ್ಲಿಯೂ ಕಾನೂನಾತ್ಮಕವಾಗಿ ಎಫ್ಐಆರ್ ದಾಖಲಿಸಿಕೊಂಡು, ಡಿಸಿಪಿ ಹಂತದ ಅಧಿಕಾರಿಗಳ ಮೂಲಕ ತನಿಖೆ ನಡೆಸಲಾಗುತ್ತಿದೆ. ಕೆಲವೊಮ್ಮೆ ಲೀಡ್ ತಕ್ಷಣ ದೊರೆಯದಿದ್ದರೂ ಯಾವುದೇ ಬಾಹ್ಯ ಉದ್ದೇಶದಿಂದ ತನಿಖೆ ವಿಳಂಬವಾಗುತ್ತಿಲ್ಲ” ಎಂದು ಕಮಿಷನರ್ ಹೇಳಿದ್ದಾರೆ.
ಕಮಿಷನರ್ ಸೀಮಂತ್ ಕುಮಾರ್ ಅವರನ್ನು ಭೇಟಿಯಾದ ಬಳಿಕ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, “ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೇನೆ. ಆದರೆ ಈ ಅನುಭವ ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ. ನಾನು ಸಲ್ಲಿಸಿದ ದೂರು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಆದರೆ ಮತ್ತೊಬ್ಬ ಮಹಿಳೆ ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ. ನನ್ನ ದೂರು ಕಡಿಮೆ ಮುಖ್ಯವೇ ಅಥವಾ ಮಾನ್ಯವೇ?” ಎಂದು ಪ್ರಶ್ನಿಸುವ ಮೂಲಕ ಪರೋಕ್ಷವಾಗಿ ರಮ್ಯಾ ಪ್ರಕರಣವನ್ನು ಅವರು ಉಲ್ಲೇಖಿಸಿದ್ದರು.
—-





Be the first to comment