ವಿದೇಶದಲ್ಲೂ ವಿಜಯಾನಂದ ರಿಲೀಸ್

ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಸಿನಿಮಾ ʻವಿಜಯಾನಂದʼ ಡಿಸೆಂಬರ್ 9ಕ್ಕೆ ತೆರೆ ಕಾಣಲಿದೆ. ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ ಸೇರಿದಂತೆ ಹಲವು ವಿದೇಶಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.

ಸಿನಿಮಾದಲ್ಲಿ ನಿಹಾಲ್‌ ಹಾಗೂ ಸಿರಿ ಪ್ರಹ್ಲಾದ್ ಜೋಡಿಯಾಗಿ ನಟಿಸಿದ್ದಾರೆ. ವಿಆರ್‌ಎಲ್ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಆನಂದ ಸಂಕೇಶ್ವರ ಚಿತ್ರ ನಿರ್ಮಿಸುತ್ತಿದ್ದಾರೆ. ‘ಟ್ರಂಕ್’ ಖ್ಯಾತಿಯ ನಿರ್ದೇಶಕಿ ರಿಷಿಕಾ ಶರ್ಮಾ ಚಿತ್ರ ನಿರ್ದೇಶಿಸುತ್ತಿದ್ದಾರೆ.

ವಿಜಯ ಸಂಕೇಶ್ವರರ ಪಾತ್ರದಲ್ಲಿ ನಿಹಾಲ್ ರಜಪೂತ್, ಶ್ರೀಮತಿ ಲಲಿತಾ ಸಂಕೇಶ್ವರರ ಪಾತ್ರದಲ್ಲಿ ಸಿರಿ ಪ್ರಹ್ಲಾದ್, ವಿಜಯ ಸಂಕೇಶ್ವರರ ತಂದೆ ಬಿ.ಜಿ. ಸಂಕೇಶ್ವರರ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್, ಆನಂದ ಸಂಕೇಶ್ವರರ ಪಾತ್ರದಲ್ಲಿ ಭರತ್ ಬೋಪಣ್ಣ ಹಾಗೂ ವಿಜಯ ಸಂಕೇಶ್ವರರ ಗುರುಗಳ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ.

ʻವಿಜಯಾನಂದ’ ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಟೀಸರ್‌ ಗಮನ ಸೆಳೆದಿದ್ದು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!