ಜೀ ಕನ್ನಡದಲ್ಲಿ ಅ.15ಕ್ಕೆ ವಿಕ್ರಾಂತ್ ರೋಣ

ಕಿಚ್ಚ ಸುದೀಪ್ ನಟನೆಯ ಸೂಪರ್ ಹಿಟ್ ಚಿತ್ರ ವಿಕ್ರಾಂತ್ ರೋಣ ಜೀ ಕನ್ನಡದಲ್ಲಿ ಅಕ್ಟೋಬರ್ 15ರಂದು ಸಂಜೆ 7.30ಕ್ಕೆ ಪ್ರಸಾರ ಆಗಲಿದೆ.

ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರಕ್ಕೆ ಜಾಕ್ ಮಂಜು ಅವರು ಹಣ ಹೂಡಿದ್ದಾರೆ.

ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ, ವಿಲಿಯಮ್ ಡೇವಿಡ್ ಅವರ ಛಾಯಾಗ್ರಹಣವಿದೆ. ಬಹುಕೋಟಿ ವೆಚ್ಚದ ಈ ಚಿತ್ರದ ಹಂಚಿಕೆ ಜವಾಬ್ದಾರಿಯನ್ನು ದೇಶದ ಅತಿದೊಡ್ಡ ಮನರಂಜನಾ ಸಂಸ್ಥೆಯಾದ ಜೀ ಸ್ಟುಡಿಯೋಸ್ ವಹಿಸಿದೆ.

ಕಿಚ್ಚ ಸುದೀಪ್ ಸೇರಿದಂತೆ ನಿರೂಪ್ ಭಂಡಾರಿ , ನೀತಾ ಅಶೋಕ್ , ಜಾಕ್ವಲಿನ್ ಫರ್ನಾಂಡಿಸ್ ಚಿತ್ರದಲ್ಲಿ ನಟಿಸಿದ್ದಾರೆ.

ಕಿಚ್ಚ ಸುದೀಪ್ ಅವರು ಜಾಕ್ವಲಿನ್ ಫರ್ನಾಂಡಿಸ್ ಜೊತೆ ಹೆಜ್ಜೆ ಹಾಕಿದ “ರಾರಾ ರಕ್ಕಮ್ಮ” ಹಾಡು ದೇಶದಲ್ಲೇ ಸಂಚಲನ ಮೂಡಿಸಿತ್ತು. ಈ ಹಾಡು ಈಗಲೂ ಸೋಷಿಯಲ್ ಮೀಡಿಯಾದಲ್ಲಿ , ರೀಲ್ಸ್ ಗಳಲ್ಲಿ ಅತಿಹೆಚ್ಚು ಬಳಕೆಯಲ್ಲಿದೆ.

ಕಿಚ್ಚ ಸುದೀಪ್ ಅಭಿನಯದ 3ಡಿ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥೆಯ ಮೂಲಕ ಹೊಸ ಪ್ಯಾಂಟಸಿ ಲೋಕಕ್ಕೆ ಪ್ರೇಕ್ಷಕರನ್ನು ಕರೆದುಕೊಂಡ ಹೋದ ಹೆಗ್ಗಳಿಕೆಗೆ ಪಾತ್ರವಾಗಿತ್ತು.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!