‘ವಿಷ್ಣುವಲ್ಲಭ’ ಚಿತ್ರದ ಮುಹೂರ್ತ

ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದಲ್ಲಿ ಶಾನ್ ಹಾಗೂ ಸಾನ್ಯ ಅಯ್ಯರ್ ನಾಯಕ, ನಾಯಕಿಯಾಗಿ ನಟಿಸುತ್ತಿರುವ ‘ವಿಷ್ಣುವಲ್ಲಭ’ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.

ಸಚಿವ ಜಮೀರ್ ಅಹಮದ್ ಖಾನ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಕೆ.‌ಮಂಜು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ಮಾಪಕ ರೆಹಮಾನ್  ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಹಿಂದೆ ಗಣೇಶ್ ಅಭಿನಯದ “ಮದುವೆಮನೆ” ಚಿತ್ರವನ್ನು ನಿರ್ಮಿಸಿದ್ದ ರುಹಿನಾ ರೆಹಮಾನ್ ಅವರು ನಿರ್ಮಿಸುತ್ತಿರುವ ಎರಡನೇ ಚಿತ್ರವಿದು. ರುಹಿನಾ ರೆಹಮಾನ್, ವಿಷ್ಣುವರ್ಧನ್ ಅಭಿನಯದ “ಯಜಮಾನ”, ಸುದೀಪ್ ಅಭಿನಯದ “ಹುಚ್ಚ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ರೆಹಮಾನ್ ಅವರ ಪುತ್ರಿ .

‘ವಿಷ್ಣುವಲ್ಲಭ’ ಪ್ರೇಮಕಥಾನಕವಾಗಿದ್ದು, ರುಹಿನಾ  ಕಥೆ ಬರೆದಿದ್ದಾರೆ. ಕ್ರಿಯೇಟಿವ್ ಹೆಡ್ ಅಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. “ರಥಾವರ” ಚಿತ್ರದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.

ಶಾನ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು ಅವರಿಗೆ ಮೊದಲ ಚಿತ್ರ.  “ಪುಟ್ಟಗೌರಿ ಮದುವೆ” ಖ್ಯಾತಿಯ ಸಾನ್ಯ ಅಯ್ಯರ್  ಚಿತ್ರದ ನಾಯಕಿ. “ಕೆ.ಜಿ.ಎಫ್” ಅವಿನಾಶ್, ಸಂಪತ್, ಸಂಗೀತ, ಸ್ವಾತಿ, ಯಶ್ ಶೆಟ್ಟಿ ತಾರಾಬಳಗದಲ್ಲಿದ್ದಾರೆ.

ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.  ನಂತರ ಶ್ರೀಲಂಕಾ ಮುಂತಾದ ಕಡೆ ಚಿತ್ರೀಕರಣವಾಗಲಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!