ಸೆ. 27ರಂದು ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ

ಕನ್ನಡ ಚಿತ್ರರಂಗದ ಮೇರುನಟ  ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಸೆ. 27ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಆಚರಿಸಲು ವಿಷ್ಣು ಸೇನಾನಿಗಳು ಸಜ್ಜಾಗುತ್ತಿದ್ದಾರೆ.

ಸುಮಾರು 1 ಕೋಟಿ  ವೆಚ್ಚದಲ್ಲಿ 18 ಗಂಟೆಗಳ ಕಾಲ ನಡೆಯಲಿರುವ  ಬೃಹತ್ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ.  ಈ ಮಹೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ರೂಪಿಸಲಾಗುತ್ತಿದೆ. ಮಹೋತ್ಸವದ  ಆಕರ್ಷಣೆಯಾಗಿ ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜದ ಮೆರವಣಿಗೆ ನಡೆಯಲಿದೆ.

ಸೆ.27ರಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಟೌನ್ ಹಾಲ್‌ನಿಂದ ಆರಂಭವಾಗುವ ಮೆರವಣಿಗೆ ನಾಯಂಡಹಳ್ಳಿಯವರೆಗೆ ಸಾಗಲಿದೆ. ಅರ್ಧ ಕಿ.ಮೀ. ಉದ್ದದ ಬೃಹತ್ ಧ್ವಜವನ್ನು ಸಾವಿರಾರು ವಿಷ್ಣುವರ್ಧನ್ ಅಭಿಮಾನಿಗಳು  ಹೊತ್ತು ಸಾಗಲಿದ್ದಾರೆ. ಇದು ಅಮೃತ ಮಹೋತ್ಸವದ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಲಿದೆ.

ಮೆರವಣಿಗೆಯ ನಂತರ ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.  ಬೆಳಗ್ಗೆ 6 ಗಂಟೆಗೆ ಆರಂಭವಾಗುವ ಸಂಭ್ರಮ ರಾತ್ರಿ 12 ಗಂಟೆಯವರೆಗೂ ಮುಂದುವರಿಯಲಿದೆ.

“ಆ ದಿನ ವಿಷ್ಣು ಸೇನಾನಿಗಳು  ಒಬ್ಬ ಮಹಾನ್ ಕಲಾವಿದನ ಮೇಲಿನ ಅಭಿಮಾನ ಹೇಗಿರುತ್ತದೆ ಎಂಬುದನ್ನು ಇಡೀ ನಾಡಿಗೆ ತೋರಿಸಲಿದ್ದಾರೆ. ಅಮೃತ ಮಹೋತ್ಸವ ಅಭಿಮಾನಿಗಳ ಪಾಲಿಗೆ  ಐತಿಹಾಸಿಕ ಕ್ಷಣವಾಗಬೇಕು ಎಂಬ ಕನಸಿನಿಂದ ಪ್ರತಿಯೊಂದು ಹೆಜ್ಜೆಯನ್ನೂ ರೂಪಿಸುತ್ತಿದ್ದೇವೆ” ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.

—–

 

Be the first to comment

Leave a Reply

Your email address will not be published. Required fields are marked *

Translate »
error: Content is protected !!