ವಿಷ್ಣು ವರ್ಧನ್ ಅವರ ಹಲವು ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಿ.ವಿಜಯ್ ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಜಯ್ ಕುಮಾರ್ ಅವರು ವಿಷ್ಣವರ್ಧನ ಅವರ ‘ಸಿಂಹಾದ್ರಿಯ ಸಿಂಹ’, ‘ಲಯನ್ ಜಗಪತಿರಾವ್’, ‘ಸ್ವಚ್ಛ ಭಾರತ’ ಸಿನಿಮಾ ಸೇರಿದಂತೆ ಹಲವು ಸಿನಿಮಾ ನಿರ್ಮಾಣ ಮಾಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದ ಅವರು ಸಾಕಷ್ಟು ಉತ್ತಮ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದರು.
ವಿಜಯ್ ಕುಮಾರ್ ಅವರ ಜಯನಗರದ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೆಲವರಿಗಷ್ಟೇ ಅಂತಿಮ ಸಂಸ್ಕಾರಕ್ಕೆ ಅನುಮತಿ ನೀಡಲಾಗಿದೆ.
______

Be the first to comment