ಕಾಂತಾರ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ಮೆಚ್ಚುಗೆ

ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ರಿಷಬ್ ಶೆಟ್ಟಿ ಅವರ ಕಾಂತಾರ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ನಾನು ಕಾಂತಾರ ಸಿನಿಮಾ ನೋಡಿದೆ. ಇದೊಂದು ಅದ್ಭುತ ಅನುಭವ. ಈ ರೀತಿಯ ಸಿನಿಮಾವನ್ನು ನೋಡಿರಲಿಲ್ಲ. ರಿಷಬ್ ಶೆಟ್ಟಿಗೆ ಹ್ಯಾಟ್ಸ್ ಆಫ್. ರಿಷಬ್ ನೀವು ಅದ್ಭುತ ಕೆಲಸ ಮಾಡಿದ್ದೀರಿ. ನಾನು ನಿಮಗೆ ಕರೆ ಮಾಡಿ ಮಾತನಾಡುತ್ತೇನೆ. ನನ್ನ ಅನುಭವವನ್ನು ಹಂಚಿಕೊಳ್ಳದೇ ಇರಲು ಸಾಧ್ಯವಾಗಲಿಲ್ಲ’ ಎಂದಿದ್ದಾರೆ.

ಕಲೆ, ಜಾನಪದ ವಿಚಾರಗಳು ಸಿನಿಮಾದಲ್ಲಿ ಅಡಗಿದೆ. ಸಿನಿಮಾದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ನಿಮ್ಮ ಬಳಿ ಇರುವುದು ಅದೆಂಥ ಎನರ್ಜಿ. ಅದನ್ನು ನಾನು ಈವರೆಗೆ ನೋಡಿಲ್ಲ. ಕಾಂತಾರ ರಿಷಬ್ ಶೆಟ್ಟಿ ಮಾಡಿದ ಮಾಸ್ಟರ್​ಪೀಸ್. ಸಿನಿಮಾದಲ್ಲಿ ಎಲ್ಲವೂ ಚೆನ್ನಾಗಿದೆ’ ಎಂದು ವಿವೇಕ್ ಅಗ್ನಿಹೋತ್ರಿ ಹೊಗಳಿದ್ದಾರೆ.

ಸೆ. 30ಕ್ಕೆ ಬಿಡುಗಡೆ ಆದ ಕಾಂತಾರ ಚಿತ್ರದ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಚಿತ್ರಮಂದಿರಗಳಲ್ಲಿ ಚಿತ್ರಕ್ಕೆ ಇನ್ನೂ ಪ್ರೇಕ್ಷಕರ ದಂಡು ಹರಿದು ಬರುತ್ತಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಯಿತು. ಈ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಗಿದ್ದು, 90ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!