‘ಗಂಧದ ಗುಡಿ’ ಪ್ರೀ ರಿಲೀಸ್ ಗೆ ಗಣ್ಯರ ದಂಡು

ನಟ ಪುನೀತ್ ಕೊನೆಯ ಸಿನಿಮಾ ‘ಗಂಧದ ಗುಡಿ’ ಪ್ರೀ ರಿಲೀಸ್ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಹಲವು ಗಣ್ಯರು ಭಾಗಿ ಆಗಲಿದ್ದಾರೆ.

ʻಪುನೀತ್ ಪರ್ವʼ ಹೆಸರಿನಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಸ್ಯಾಂಡಲ್ ವುಡ್ ಮತ್ತು ಪರಭಾಷೆಯ ಕಲಾವಿದರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಘವೇಂದ್ರ ರಾಜ್ ಕುಮಾರ್ ತಿಳಿಸಿದ್ದಾರೆ.

ರಾಘವೇಂದ್ರ ರಾಜ್ ಕುಮಾರ್ ಅವರು ಈ ಕಾರ್ಯಕ್ರಮ ಪುನೀತ್‌ ರಾಜ್‌ಕುಮಾರ್‌ ಪತ್ನಿ ಅಶ್ವಿನಿ ಅವರ ಮುಂದಾಳತ್ವದಲ್ಲಿ ನಡೆಯುತ್ತಿದೆ. ಪುನೀತ್ ಗಂಧದ ಗುಡಿಯನ್ನು ಬಹಳ ಪ್ರೀತಿಯಿಂದ ತಯಾರಿಸಿದ್ದಾರೆ. ದೇವರು ಈ ಸಿನಿಮಾ ಮುಗಿಸಿ ಹೋಗಲು ಅಪ್ಪುಗೆ ಅವಕಾಶ ಕೊಟ್ಟ. ಗಂಧದ ಗುಡಿ ಕಾರ್ಯಕ್ರಮ ಒಂದು ಸೆಲೆಬ್ರೇಷನ್ ಆಗಿದೆ. ಅಪ್ಪು ನಮ್ಮೊಂದಿಗೆ ಇದ್ದಿದ್ದರೆ ಎಷ್ಟು ಚೆನ್ನಾಗಿ ಮಾಡುತ್ತಿದ್ದನೋ ಅದಕ್ಕಿಂತ ಚೆನ್ನಾಗಿ ನಾವು ಈ ಕಾರ್ಯಕ್ರಮ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ಹಾಡು, ಡಾನ್ಸ್ ಎಲ್ಲವೂ ಇರಲಿದೆ ಎಂದು ಹೇಳಿದ್ದಾರೆ.

ಯಶ್, ಸೂರ್ಯ, ಬಾಲಯ್ಯ, ರಾಣ ದಗ್ಗುಭಾಟಿ ಸೇರಿದಂತೆ ಅನೇಕ ಸಿನಿ ಗಣ್ಯರು ಕಾರ್ಯಕ್ರಮಕ್ಕೆ ಬರುತ್ತಾರೆ. ಕಾರ್ಯಕ್ರಮದಲ್ಲಿ ಎಲ್ಲಾ ಚಿತ್ರರಂಗದ ಗಣ್ಯರು ಸೇರಲಿದ್ದಾರೆ. ಈ ಕಾರ್ಯಕ್ರಮ ಕಣ್ಣಿಗೆ ಹಬ್ಬದ ಹಾಗೆ ಇರುತ್ತದೆ ಎಂದು ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾದ ಟ್ರೈಲರ್ ಮೆಚ್ಚುಗೆಗೆ ಪಾತ್ರವಾಗಿದ್ದು, ಅಕ್ಟೋಬರ್ 28ರಂದು ಸಿನಿಮಾ ರಿಲೀಸ್ ಆಗಲಿದೆ. ರಾಜ್ಯದೆಲ್ಲೆಡೆ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!