ಮೇ 27ಕ್ಕೆ ವೀಲ್ ಚೇರ್ ರೋಮಿಯೋ ರಿಲೀಸ್

ಮಯೂರಿ ನಟನೆಯ ವೀಲ್ ಚೇರ್ ರೋಮಿಯೋ ಚಿತ್ರ ಮೇ 27ರಂದು ರಿಲೀಸ್ ಆಗಲಿದೆ.

ಇದರಲ್ಲಿ ಮಯೂರಿ ಅಂಧ ವೇಶ್ಯೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಮ್ ಚೇತನ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾನೆ. ನಟರಾಜ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಬಿ.ಜೆ.ಭರತ್ ಸಂಗೀತ ನಿರ್ದೇಶಿಸಿದ್ದಾರೆ.

ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಹಿಟ್ ಆಗಿವೆ. ಗುರುಕಶ್ಯಪ್ ಸಂಭಾಷಣೆ ಬರೆದಿದ್ದು, ಸಂತೋಷ್ ಪಾಂಡಿ ಕ್ಯಾಮೆರಾ ಚಿತ್ರಕ್ಕಿದೆ. ಸುಚೇಂದ್ರ ಪ್ರಸಾದ್, ತಬಲ ನಾಣಿ, ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಗಸ್ತ್ಯ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟಾಚಲಯ್ಯ ಬಂಡವಾಳವನ್ನು ಹೂಡಿದ್ದಾರೆ.

ಕಳೆದೆರಡು ವರ್ಷಗಳಿಂದ ಸಿನಿಮಾ ರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ಮಯೂರಿ ಈಗ ರೀ ಎಂಟ್ರಿ ಕೊಟ್ಟಿದ್ದಾರೆ. ಅಂಧ ಯುವತಿಯಾಗಿ ಅವರು ಕಾಣಿಸಿಕೊಳ್ಳುತ್ತಿರುವುದು ವಿಶೇಷ ಆಗಿದೆ.

ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಜೆಕೆ ಹಾಗೂ ಮಯೂರಿ ಜನಪ್ರಿಯತೆ ಪಡೆದರು. ಈ ಧಾರಾವಾಹಿ ಮೂಲಕ ಮಯೂರಿ ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದರು. ಅಶ್ವಿನಿ ನಕ್ಷತ್ರ ಧಾರಾವಾಹಿಯ ಬಳಿಕ ‘ಕೃಷ್ಣ ಲೀಲಾ’ ಸಿನಿಮಾದಲ್ಲಿ ನಟಿಸಿದರು. ಈ ಚಿತ್ರದ ಬಳಿಕ ಇಷ್ಟಕಾಮ್ಯ, ಮೌನಂ, ಅನಾದ್ಯಂತ, ರುಸ್ತುಂ, ನನ್ನ ಪ್ರಕಾರ, ನಟರಾಜ ಸರ್ವೀಸ್, ಪೊಗರು ಸಿನಿಮಾಗಳಲ್ಲಿ ನಟಿಸಿದರು.

ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಸ್ನೇಹಿತನನ್ನು ಮದುವೆಯಾದ ಮಯೂರಿ ಕುಟುಂಬಸ್ಥರ ಸಮ್ಮುಖದಲ್ಲಿ ಸಪ್ತಪದಿ ತುಳಿದರು. ಮಯೂರಿ ಈಗ ಹೊಸ ಚಿತ್ರದ ಮೂಲಕ ನಟನೆಗೆ ಮರಳಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!