“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ನಲ್ಲೇ ನಿರ್ದೇಶಕರು ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಚಿತ್ರವನ್ನು ನೋಡುವ ಕಾತುರ ಹೆಚ್ಚಿಸಿದ್ದಾರೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದ. ಚಿತ್ರ ಇದೇ ಜೂನ್ 26 ರಂದು ತೆರೆಗೆ ಬರಲಿದೆ.
ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ “X&Y” ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ “X&Y” ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment