ಈ ವಾರ ತೆರೆಗೆ ‘ಯಾನ’

 i entertainment ಹಾಗೂ Acme ಮೂವೀಸ್ ಇಂಟರ್ ನ್ಯಾಷನಲ್ ಲಾಂಛನದಲ್ಲಿ ಜೈಜಗದೀಶ್ ಅವರು ಅರ್ಪಿಸಿ, ಹರೀಶ್ ಶೇರಿಗಾರ್, ಶರ್ಮಿಳಾ ಶೇರಿಗಾರ್, ವೈಭವಿ, ವೈನಿಧಿ, ವೈಸಿರಿ ಅವರು ನಿರ್ಮಿಸಿರುವ `ಯಾನ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ವಿಜಯಲಕ್ಷ್ಮೀಸಿಂಗ್ ಅವರು ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿಜಯಲಕ್ಷ್ಮೀಸಿಂ ಹಾಗೂ ಸುಹಾಸ್ ಗಂಗಾಧರ್ ಚಿತ್ರಕಥೆ ಬರೆದಿದ್ದಾರೆ. ಸುನಿ ಹಾಗೂ ಅಭಿಷೇಕ್ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ. ಕರ್ಮ್ ಚಾವ್ಲಾ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ವೈಭವಿ, ವೈನಿಧಿ, ವೈಸಿರಿ, ಚಕ್ರವರ್ತಿ, ಸುಮುಖ, ಅಭಿಷೇಕ್, ಅನಂತನಾಗ್, ಸುಹಾಸಿನಿ ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರರಾಜ್, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದವರಿದ್ದಾರೆ.

This Article Has 1 Comment
  1. Pingback: home pagina

Leave a Reply

Your email address will not be published. Required fields are marked *

Translate »
error: Content is protected !!