ಡಾ. ವಿಷ್ಣುವರ್ಧನ್ ಹಾಗೂ ಪ್ರೇಮಾ ಅಭಿನಯದ ಸೂಪರ್ ಹಿಟ್ ಚಿತ್ರ ‘ಯಜಮಾನ’ 25 ವರ್ಷಗಳ ನಂತರ ಆಧುನಿಕ ತಂತ್ರಜ್ಞಾನದೊಂದಿಗೆ ನ.7ಕ್ಕೆ ರಾಜ್ಯಾದ್ಯಂತ ಮರು ಬಿಡುಗಡೆಗೆ ಸಜ್ಜಾಗಿದೆ.
ಆರ್.ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ ಯಜಮಾನ ಚಿತ್ರವನ್ನು ವಿಷ್ಣುವರ್ಧನ್ ಅಭಿಮಾನಿಯಾಗಿರುವ ಎಸ್.ಡಿ. ಮುನಿಸ್ವಾಮಿ, ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರ 150 ಕ್ಕೂ ಹೆಚ್ಚು ಕಡೆ ಬಿಡುಗಡೆಯಾಗಲಿದೆ.
ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ‘ಯಜಮಾನ’ ಚಿತ್ರವನ್ನು ಡಿಐ ಬಳಸಿ 4k ಡಿಜೆಟಲ್ ಪ್ರೊಜೆಕ್ಷನ್‌ಗೆ ತಯಾರು ಮಾಡಲಾಗಿದೆ. ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್‌ಗೆ ವರ್ಗಾಯಿಸಲಾಗಿದೆ.
2000 ಇಸವಿಯಲ್ಲಿ ತೆರೆ ಕಂಡ ಯಜಮಾನ ಚಿತ್ರ 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 25 ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಯಶಸ್ವಿ ಪ್ರದರ್ಶನ ಕಂಡಿದೆ. 25 ವರ್ಷಗಳ ಹಿಂದೆಯೇ 35 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿತ್ತು.
ನುರಿತ ತಂತ್ರಜ್ಞರನ್ನು ಕರೆಸಿ ಅವರಿಂದ ಈಗಿನ ಆಧುನಿಕ ರೀತಿಯಲ್ಲಿ ಸೌಂಡ್ ಎಫೆಕ್ಟ್ ಅಳವಡಿಸಲಾಗಿದೆ. ಇದಕ್ಕೆ ಬಹಳ ಸಮಯ, ಹಣ ವೆಚ್ಚವಾಗಿದೆ. ಮುನಿಸ್ವಾಮಿ ಅವರು ಯಾವುದೇ ಕೊರತೆ ಬಾರದ ಹಾಗೆ ಕೆಲಸಗಳನ್ನು ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ರಾಜೇಶ್ ರಾಮನಾಥ್ ತಿಳಿಸಿದ್ದಾರೆ.

—-





Be the first to comment