‘ರಾಮಾಯಣ’ ಸಿನಿಮಾದ ರಾವಣನ ಪಾತ್ರಕ್ಕಾಗಿ ಯಶ್ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಯಶ್ ಈ ಚಿತ್ರದಲ್ಲಿ ರಾವಣನ ಪಾತ್ರ ನಿರ್ವಹಿಸುವ ಜೊತೆಗೆ ಸಹ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ನಟನೆಯ ಜೊತೆಗೆ ನಿರ್ಮಾಣದಲ್ಲಿಯೂ ಯಶ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ರಾಮಾಯಣ’ ಚಿತ್ರದ ಎರಡು ಭಾಗಗಳಿಗಾಗಿ ರಣಬೀರ್ ಕಪೂರ್ ಸುಮಾರು 150 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಸಂಭಾವನೆಯ ಕುರಿತು ನಟರಾಗಲಿ, ಚಿತ್ರತಂಡವಾಗಲಿ ಅಧಿಕೃತ ಮಾಹಿತಿ ನೀಡಿಲ್ಲ.
‘ಕೆಜಿಎಫ್: ಚಾಪ್ಟರ್ 1’ ಚಿತ್ರದ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಯಶ್, ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದರು. ಈ ಚಿತ್ರಗಳ ಯಶಸ್ಸಿನಿಂದ ಅವರ ಮಾರುಕಟ್ಟೆ ಮೌಲ್ಯ ಹೆಚ್ಚಾಯಿತು.
‘ರಾಮಾಯಣ: ಭಾಗ 1’ ಸಿನಿಮಾ ಬಿಡುಗಡೆಯಾದ ಎರಡು ದಿನಗಳಲ್ಲಿ ಭಾರತೀಯ ಬಾಕ್ಸ್ ಆಫೀಸ್ನಲ್ಲಿ112.90 ಕೋಟಿ ರೂ. ಗಳಿಸಿದೆ. ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಂಡಿದ್ದಾರೆ.
—-





Be the first to comment