‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರಕ್ಕಾಗಿ ಯಶ್ ಸುಮಾರು 150 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಯಶ್ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರಕ್ಕೆ ಸಹ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 150 ಕೋಟಿ ಸಂಭಾವನೆಯನ್ನು ನೇರವಾಗಿ ತೆಗೆದುಕೊಳ್ಳದೆ ಚಿತ್ರ ನಿರ್ಮಾಣದ ಮೇಲೆ ಹೂಡಿಕೆ ಮಾಡಿರುವ ಸಾಧ್ಯತೆ ಇದೆ. ಹೀಗಾಗಿ ಅವರ ಒಟ್ಟು ಲಾಭ ಇನ್ನಷ್ಟು ಹೆಚ್ಚಿರಬಹುದು ಎಂದು ಚರ್ಚೆ ನಡೆಯುತ್ತಿದೆ.
‘ಟಾಕ್ಸಿಕ್’ ಚಿತ್ರವನ್ನು ಯಶ್ ಮತ್ತು ವೆಂಕಟ್ ಕೆ ನಾರಾಯಣ್ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಹಾಗೂ ರುಕ್ಮಿಣಿ ವಸಂತ್ ನಾಯಕಿಯರಾಗಿ ನಟಿಸುತ್ತಿದ್ದಾರೆ. ಮಾರ್ಚ್ 19ರಂದು ಈದ್ ಹಾಗೂ ಯುಗಾದಿ ಹಬ್ಬಗಳ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಟೀಸರ್ ಮತ್ತು ಗ್ಲಿಂಪ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಚಿತ್ರದ ಮಾಸ್ ಆಕ್ಷನ್ ಹೈಲೈಟ್ ಆಗಿದೆ. ರಿಲೀಸ್‌ಗೆ ಮುನ್ನವೇ ‘ಟಾಕ್ಸಿಕ್’ ಬಾಕ್ಸ್ ಆಫೀಸ್ ಮೇಲೆ ದಾಳಿ ಮಾಡಲು ಸಜ್ಜಾಗಿದೆ. ಚಿತ್ರ ಬಿಡುಗಡೆಗೂ ಮುನ್ನವೇ ಭಾರಿ ಚರ್ಚೆಗೆ ಗ್ರಾಸವಾಗಿದೆ.
—–





Be the first to comment