ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ.
ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸಲಾಗುವುದು ಎಂದು ಯಶ್ ತಿಳಿಸಿದ್ದಾರೆ.
ಸಿನಿಮಾವನ್ನು ಸಿನಿಮಾಕಾನ್ ನಲ್ಲಿ ಚಿತ್ರವನ್ನು ಪ್ರದರ್ಶಿಸಿದ ನಂತರ ಜಾಗತಿಕ ಮಟ್ಟದಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ಈ ಸಿನಿಮಾವನ್ನು ವಿಶ್ವದಾದ್ಯಂತ ತಲುಪಿಸಬೇಕೆಂಬ ನಮ್ಮ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ. ಚಿತ್ರ ಈಗಾಗಲೇ ಪೂರ್ಣಗೊಂಡಿದ್ದು, ಜಾಗತಿಕ ವಿತರಣೆ ಹಾಗೂ ಪಾಲುದಾರಿಕೆಗಳ ವ್ಯವಸ್ಥೆಯನ್ನು ಸರಿಹೊಂದಿಸುವ ಕಾರ್ಯ ನಡೆಯುತ್ತಿದೆ. ಈ ಕಾರಣದಿಂದ ಮೊದಲು ಘೋಷಿಸಿದ್ದ ದಿನಾಂಕದಂದು ಚಿತ್ರ ಬಿಡುಗಡೆಯಾಗುವುದಿಲ್ಲ ಎಂದಿದ್ದಾರೆ.
ಚಿತ್ರ ಜಾಗತಿಕ ಮಟ್ಟದಲ್ಲಿ ಒಂದೇ ದಿನ ಬಿಡುಗಡೆಯಾಗುವಂತೆ ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಯಶ್ ತಿಳಿಸಿದ್ದಾರೆ.
ಜಾಗತಿಕ ವೇದಿಕೆಯಲ್ಲಿ ಭಾರತೀಯ ಸಿನೆಮಾ ತನ್ನದೇ ಆದ ಗುರುತು ಮೂಡಿಸುತ್ತಿರುವ ಈ ಸಂದರ್ಭದಲ್ಲಿ ನಾವು ಹೊಣೆಗಾರಿಕೆಯನ್ನು ಅರಿತು ಚಿತ್ರದ ಮಟ್ಟವನ್ನು ಹೆಚ್ಚಿಸುವತ್ತ ಗಮನ ಹರಿಸುತ್ತಿದ್ದೇವೆ. ನಟ ಹಾಗೂ ನಿರ್ಮಾಪಕನಾಗಿ ಈ ಚಿತ್ರ ವಿಶ್ವದ ಪ್ರೇಕ್ಷಕರಿಗೆ ತಲುಪುವಾಗ ಅದಕ್ಕೆ ತಕ್ಕಂತೆ ಪರಿಣಾಮ ಮೂಡಿಸಬೇಕೆಂಬುದು ನಮ್ಮ ಉದ್ದೇಶವಾಗಿದೆ. ತಾಳ್ಮೆಯಿಂದ ಕಾಯುತ್ತಿರುವ ಅಭಿಮಾನಿಗಳಿಗೆ ನಾವು ಹೆಮ್ಮೆ ಪಡುವಂತಹ ಚಿತ್ರವನ್ನು ನೀಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ





Be the first to comment