‘ಮುಂಗಾರು ಮಳೆ’ ಖ್ಯಾತಿಯ ನಿರ್ದೇಶಕ ಯೋಗರಾಜ್ ಭಟ್ ಮತ್ತು ನಿರ್ಮಾಪಕ ಇ ಕೃಷ್ಣಪ್ಪ ಜೋಡಿ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ.
ಸೂಪರ್ ಹಿಟ್ ಆಗಿದ್ದ ಮುಂಗಾರು ಮಳೆ ಚಿತ್ರ ನಟ ಗಣೇಶ್ ಗೆ ಗೋಲ್ಟನ್ ಸ್ಟಾರ್ ಪಟ್ಟ ನೀಡಿತ್ತು.ಈ ಚಿತ್ರದಲ್ಲಿ ನಟಿ ಪೂಜಾ ಗಾಂಧಿ ಪದಾರ್ಪಣೆ ಮಾಡಿದ್ದರು. ಸೂಪರ್ ಹಿಟ್ ಚಿತ್ರದ ಹಿಂದಿನ ಸೂತ್ರದಾರರಾದ ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಮತ್ತೆ ಒಂದಾಗಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಹೊಸ ಚಿತ್ರದಲ್ಲಿ ಮತ್ತೆ ಹೊಸ ಮುಖಗಳ ಪರಿಚಯಕ್ಕೆ ಮುಂದಾಗಿದ್ದು, ಆಡಿಷನ್ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲೇ ಚಿತ್ರ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ.
16 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ”ಮುಂಗಾರು ಮಳೆ” ಬಾಕ್ಸಾಫೀಸ್ ನಲ್ಲಿ ಭರ್ಜರಿ ಹಿಟ್ ಕಂಡಿದ್ದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ರೀಮೇಕ್ ಆಗಿತ್ತು. ಮಲ್ಟಿಪ್ಲೆಕ್ಸ್ನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ಓಡಿದ ಭಾರತದ ಮೊದಲ ಚಿತ್ರ ಎಂಬ ದಾಖಲೆ ಕೂಡ ‘ಮುಂಗಾರು ಮಳೆ’ ಚಿತ್ರಕ್ಕಿದೆ.
—-
Post Views:
94
Be the first to comment