ಒಟಿಟಿಗೆ ಬಂದ ʻಯುವʼ

ಯುವ ರಾಜ್‌ಕುಮಾರ್ ಅಭಿನಯದ ಚಿತ್ರ ʻಯುವʼ  ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿದೆ.

ಸಿನಿಮಾ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಸಿನಿಮಾವನ್ನು ಪ್ರೈಂ ಚಂದಾದಾರರು ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ.

ʻಯುವʼ ಸಿನಿಮಾ 20 ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ. ಒಟಿಟಿಗೆ ಬಂದಿದ್ದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಕೊರಿಯೋಗ್ರಫಿ ಮಾಡಿದ್ದಾರೆ.

ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಲಾಗಿತ್ತು.ಹೊಸಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ನಡೆದಿತ್ತು.

ಏಪ್ರಿಲ್ 23ರಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಮರುದಿನ ಡಾ. ರಾಜ್‌ಕುಮಾರ್ ಜಯಂತೋತ್ಸವ ಇದೆ. ಹಾಗಾಗಿ ಅದೇ ಸಂಭ್ರಮದಲ್ಲಿ ಯುವ ರಾಜ್‌ಕುಮಾರ್ ಹೊಸ ಸಿನಿಮಾ ಘೋಷಣೆ ಮಾಡುವ ನಿರೀಕ್ಷೆಯಿದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!