ಕನ್ನಡ ಕೋಟ್ಯಾಧಿಪತಿಗೆ ಪುನೀತ್ ವಾಪಸ್!

ಕನ್ನಡದ ಕೋಟ್ಯಾಧಿಪತಿ ಮೂರನೇ ಸೀಸನ್ ನಲ್ಲಿ ನಟ ರಮೇಶ್ ಅರವಿಂದ್ ಅವರು ನಡೆಸಿಕೊಟ್ಟ ಕಾರ್ಯಕ್ರಮವು ಹೆಚ್ಚು ಟಿಆರ್ ಪಿ ತಂದುಕೊಡದೆ ಇರುವ ಹಿನ್ನೆಲೆಯಲ್ಲಿ ಮತ್ತೆ ಪುನೀತ್ ರಾಜ್ ಕುಮಾರ್ ಅವರು ನಿರೂಪಣೆ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.

ಮೂರನೇ ಸೀಸನ್ ಗೆ ಪುನೀತ್ ಅವರು ಕಾಣಿಸಿಕೊಂಡಿರಲಿಲ್ಲ. ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದ ಕಾರಣದಿಂದ ಅವರ ಬದಲಿಗೆ ರಮೇಶ್ ಅರವಿಂದ್ ಅವರು ಕಾರ್ಯಕ್ರಮ ನಿರೂಪಣೆ ಮಾಡಿದ್ದರು.

ನಾಲ್ಕನೇ ಸೀಸನ್ ನಲ್ಲಿ ಮತ್ತೆ ಜನಪ್ರಿಯತೆ ಮರಳಿ ತಂದುಕೊಳ್ಳುವ ನಿಟ್ಟಿನಲ್ಲಿ ಪುನೀತ್ ಅವರೇ ನಿರೂಪಕರಾಗಲಿದ್ದಾರೆ ಎಂದು ಮೂಲಗಳು ಹೇಳಿವೆ. ಮುಂದಿನ ಸೀಸನ್ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ ಎಂದು ತಿಳಿದುಬಂದಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!